Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:24 - ಪರಿಶುದ್ದ ಬೈಬಲ್‌

24 ನನ್ನ ಮಾತುಗಳನ್ನು ಸೀಸದ ಹಲಗೆಯ ಮೇಲೆಯೂ ಬಂಡೆಯ ಮೇಲೆಯೂ ಕೆತ್ತಿದರೆ ಎಷ್ಟೋ ಒಳ್ಳೆಯದು. ಆಗ ಅವು ಶಾಶ್ವತವಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಬ್ಬಿಣದ ಕಂಠದಿಂದ ಬಂಡೆಯ ಮೇಲೆ ಕೆತ್ತಿ ಸೀಸ ಎರೆದು ಶಾಶ್ವತಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:24
8 ತಿಳಿವುಗಳ ಹೋಲಿಕೆ  

“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


ನೀವು ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.”


ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.


ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.


“ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು