ಯೋಬ 19:27 - ಪರಿಶುದ್ದ ಬೈಬಲ್27 ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ! ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”