Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:10 - ಪರಿಶುದ್ದ ಬೈಬಲ್‌

10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:10
30 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.


ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ನನಗಾದ ಈ ಕಳಂಕವನ್ನು ಎಂದೆಂದಿಗೂ ನಾನು ತೊಡೆದುಹಾಕಲಾಗುವುದಿಲ್ಲ. ಇಸ್ರೇಲಿನ ಜನರಲ್ಲಿ ತಮ್ಮ ಅಪಮಾನಕರವಾದ ಕಾರ್ಯಗಳಿಂದ ನೀಚರೆನಿಸಿಕೊಳ್ಳುವ ಜನರಂತೆ ನೀನೂ ಆಗಿಬಿಡುವೆ. ದಯವಿಟ್ಟು ರಾಜನೊಂದಿಗೆ ಮಾತನಾಡು. ಅವನು ನಿನ್ನ ಜೊತೆಯಲ್ಲಿ ನನ್ನ ಮದುವೆ ಮಾಡಲಿ” ಎಂದಳು.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.


ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.


ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.


ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.


ಅಜ್ಞಾನವೆಂಬಾಕೆಯು ಬಾಯಿಬಡುಕಿ; ಮಂದಮತಿ ಮತ್ತು ಮೂಢಳು,


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.


ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು