Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:3 - ಪರಿಶುದ್ದ ಬೈಬಲ್‌

3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:3
26 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.


ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.


ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.


ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು