Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:10 - ಪರಿಶುದ್ದ ಬೈಬಲ್‌

10 ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟುಬಿಡಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು; ಅವನ ಮಕ್ಕಳ ಕೈಗಳು ಅವನ ಸಂಪತ್ತನ್ನು ಹಿಂತಿರುಗಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:10
15 ತಿಳಿವುಗಳ ಹೋಲಿಕೆ  

ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.


ಅವನ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ.


ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.


ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.


“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.


ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.


ನೀನು ಅವರನ್ನು ಬಿಡದೆ ಇನ್ನೂ ತಡೆದರೆ,


ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದುಹೋಗುವರು.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು