Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:12 - ಪರಿಶುದ್ದ ಬೈಬಲ್‌

12 “ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು. ಅವನು ಅದನ್ನು ತನ್ನ ನಾಲಿಗೆಯ ಕೆಳಗೆ ಅಡಗಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೆಡಕುತನ ಸಿಹಿಯಾಗಿತ್ತು ಅವನ ಬಾಯಿಗೆ ಬಚ್ಚಿಟ್ಟುಕೊಂಡಿದ್ದನು ಅದನ್ನು ನಾಲಿಗೆ ಕೆಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಅವನ ಕೆಟ್ಟತನವು ಬಾಯಿಗೆ ಸಿಹಿಯಾಗಿತ್ತು, ಅವನು ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:12
10 ತಿಳಿವುಗಳ ಹೋಲಿಕೆ  

ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?


ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು. ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.


ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು