Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:17 - ಪರಿಶುದ್ದ ಬೈಬಲ್‌

17 ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜೇನೂ ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:17
15 ತಿಳಿವುಗಳ ಹೋಲಿಕೆ  

‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.


ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.


ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.


ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು