Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:18 - ಪರಿಶುದ್ದ ಬೈಬಲ್‌

18 ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:18
25 ತಿಳಿವುಗಳ ಹೋಲಿಕೆ  

ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


“ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.


ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.


ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


“ನನ್ನ ವೈರಿಗಳು ನಾಶವಾದಾಗ ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.


ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ.


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.


ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.


ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.


“ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು