Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:24 - ಪರಿಶುದ್ದ ಬೈಬಲ್‌

24 ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:24
7 ತಿಳಿವುಗಳ ಹೋಲಿಕೆ  

ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.


ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.


ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು