Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:6 - ಪರಿಶುದ್ದ ಬೈಬಲ್‌

6 ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು; ಅವನ ತಲೆಯು ಮೋಡಗಳಿಗೆ ತಗುಲಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಪ್ರತಿಷ್ಠೆ ಆಕಾಶಕ್ಕೆ ಏರಿದರೂ ಅವನ ತಲೆ ಮೋಡಗಳನು ಮುಟ್ಟಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ ಅವನ ತಲೆಯು ಮೋಡಗಳಿಗೆ ತಗುಲಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೆಮ್ಮೆಯು ಆಕಾಶಕ್ಕೆ ಏರಿದರೂ, ಅವನ ತಲೆ ಮೇಘಕ್ಕೆ ಮುಟ್ಟಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:6
8 ತಿಳಿವುಗಳ ಹೋಲಿಕೆ  

ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು