Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:8 - ಪರಿಶುದ್ದ ಬೈಬಲ್‌

8 ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:8
14 ತಿಳಿವುಗಳ ಹೋಲಿಕೆ  

ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.


ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.


“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು