Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:13 - ಪರಿಶುದ್ದ ಬೈಬಲ್‌

13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು ಕ್ಷಣಮಾತ್ರದಲ್ಲಿ [ಅನಾಯಾಸವಾಗಿ] ಸಮಾಧಿಗೆ ಇಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:13
13 ತಿಳಿವುಗಳ ಹೋಲಿಕೆ  

ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.


ಅವರು ಆರೋಗ್ಯವಂತರಾಗಿದ್ದಾರೆ. ಜೀವನೋಪಾಯಕ್ಕಾಗಿ ಅವರು ಹೋರಾಡಬೇಕಿಲ್ಲ.


ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.


ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವಂತೆ ಪಾತಾಳವು ದುಷ್ಟರನ್ನು ಎಳೆದುಕೊಳ್ಳುವುದು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ದುಷ್ಟರು ಸ್ವಲ್ಪಕಾಲ ಅಭಿವೃದ್ಧಿಗೊಂಡರೂ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಎಲ್ಲರಂತೆ ಇಲ್ಲವಾಗುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು