ಯೋಬ 21:14 - ಪರಿಶುದ್ದ ಬೈಬಲ್14 ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ. ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?