Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:18 - ಪರಿಶುದ್ದ ಬೈಬಲ್‌

18 ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:18
20 ತಿಳಿವುಗಳ ಹೋಲಿಕೆ  

ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.


ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


“ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.


ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡುಹೋಗುವುದು.


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು