Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:2 - ಪರಿಶುದ್ದ ಬೈಬಲ್‌

2 “ನಾನು ಹೇಳುವುದನ್ನು ಕೇಳಿ. ನಿಮ್ಮಿಂದ ನನಗಾಗಬೇಕಾದ ಆದರಣೆ ಇಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಗಮನಕೊಡಿ ನನ್ನ ಮಾತುಗಳಿಗೆ ನಾನು ನಿಮ್ಮಿಂದ ಬಯಸುವ ಉಪಶಮನ ಇದುವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ, ಇವು ನೀವು ನನಗೆ ನೀಡುವ ಆದರಣೆಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:2
14 ತಿಳಿವುಗಳ ಹೋಲಿಕೆ  

ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


“ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. ಜಾಣರೇ, ನನಗೆ ಗಮನಕೊಡಿರಿ.


“ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.


“ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.


“ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.


ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ?


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ಬಳಿಕ ಯೋಬನು ಉತ್ತರಕೊಟ್ಟನು:


ನಾನು ಮಾತಾಡುವಾಗ ತಾಳ್ಮೆಯಿಂದಿರಿ. ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿ ಮಾಡಿದರೂ ಮಾಡಿರಿ.


“ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ.


ನಾನು ಹೇಳುವುದನ್ನು ಗಮನವಿಟ್ಟು ಕೇಳಿ. ನನ್ನ ವಿವರಣೆಯನ್ನು ನಿಮ್ಮ ಕಿವಿಗಳು ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು