ಯೋಬ 21:22 - ಪರಿಶುದ್ದ ಬೈಬಲ್22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ? ಅಧ್ಯಾಯವನ್ನು ನೋಡಿ |
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.