Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:9 - ಪರಿಶುದ್ದ ಬೈಬಲ್‌

9 ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಮನೆ ನಿರ್ಭೀತ, ಹಾಗೂ ಸುರಕ್ಷಿತ ಅವರ ಮೇಲೆ ಬೀಳದು ದೇವರ ದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದಿರುವವು; ದೇವರ ದಂಡವು ಅವರ ಮೇಲೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:9
9 ತಿಳಿವುಗಳ ಹೋಲಿಕೆ  

ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ. ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.


ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ. ಅವರ ಹಸುಗಳು ಕರುಗಳನ್ನು ಈಯುತ್ತವೆ.


ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು