Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:18 - ಪರಿಶುದ್ದ ಬೈಬಲ್‌

18 ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸರ್ವಶಕ್ತನು ನಮಗೇನು ಮಾಡಾನು ಎಂದು ಹೇಳಿಕೊಳ್ಳುತ್ತಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:18
9 ತಿಳಿವುಗಳ ಹೋಲಿಕೆ  

“ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು