Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:22 - ಪರಿಶುದ್ದ ಬೈಬಲ್‌

22 ಆತನ ಉಪದೇಶವನ್ನು ಸ್ವೀಕರಿಸಿಕೊ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆತನ ಬಾಯಿಂದ ಬುದ್ಧಿ ಕಲಿತುಕೊ ಆತನ ಮಾತನು ಹೃದಯದಲ್ಲಿಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:22
16 ತಿಳಿವುಗಳ ಹೋಲಿಕೆ  

ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.


ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.


ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ.


ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.


ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.


ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು