ಯೋಬ 22:23 - ಪರಿಶುದ್ದ ಬೈಬಲ್23 ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.