Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:6 - ಪರಿಶುದ್ದ ಬೈಬಲ್‌

6 ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಗಳನ್ನು ತೆಗೆದುಕೊಂಡಿದ್ದೀ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:6
12 ತಿಳಿವುಗಳ ಹೋಲಿಕೆ  

ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.


ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;


“ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.


ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ.


ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು