ಯೋಬ 22:9 - ಪರಿಶುದ್ದ ಬೈಬಲ್9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.