ಯೋಬ 23:10 - ಪರಿಶುದ್ದ ಬೈಬಲ್10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.