Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:17 - ಪರಿಶುದ್ದ ಬೈಬಲ್‌

17 ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:17
10 ತಿಳಿವುಗಳ ಹೋಲಿಕೆ  

ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.


ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.


ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.


ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.


ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.


ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.


ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತುಹೋಗಬೇಕಿತ್ತು.


ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು