Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:7 - ಪರಿಶುದ್ದ ಬೈಬಲ್‌

7 ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸಲು ಅವಕಾಶವಾಗಿ ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:7
10 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಯೆಹೂದ, ನೀನು ಹಾಗೆ ಹೇಳಿದರೂ, ನಿನ್ನಿಂದಾದಷ್ಟು ಕೆಡುಕನ್ನು ಮಾಡುತ್ತಿರುವೆ.”


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.


ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕೆಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು