Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:8 - ಪರಿಶುದ್ದ ಬೈಬಲ್‌

8 “ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮುಂದೆ ಹೋದರೂ ದೇವರು ನನಗೆ ಕಾಣಸಿಗನಯ್ಯಾ ಹಿಂದೆ ಬಂದರೂ ಆತ ನನಗೆ ಕಾಣಸಿಗುವುದಿಲ್ಲವಯ್ಯಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವದಿಲ್ಲ, ಹಿಂದೆ ಹೋದರೂ ಆತನನ್ನು ಕಾಣಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:8
9 ತಿಳಿವುಗಳ ಹೋಲಿಕೆ  

ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು