Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:11 - ಪರಿಶುದ್ದ ಬೈಬಲ್‌

11 ಬಡವರು ಆಲೀವ್ ಎಣ್ಣೆಯ ಗಾಣವಾಡಿಸುವರು; ದಾಹದಿಂದಲೇ ದ್ರಾಕ್ಷಿಅಲೆಯಲ್ಲಿ ತುಳಿದು ರಸ ತೆಗೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾಹಗೊಂಡೇ ದ್ರಾಕ್ಷಿಯನ್ನು ತುಳಿಯುತ್ತಾರೆ ತೊಟ್ಟಿಗಳಲ್ಲಿ ಎಣ್ಣೆಗಾಣವನ್ನು ಆಡಿಸುತ್ತಾರೆ ಕೋಟೆಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ಆಡಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷೆಯನ್ನು ತುಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:11
7 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


“ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.


“ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.


ಬಡವರು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದುಡಿಯುವರು. ಅವರು ಹಸಿವೆಯಿಂದಲೇ ದುಷ್ಟರ ಸಿವುಡುಗಳನ್ನು ಹೊರುವರು.


ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.


“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.


ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು