Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:16 - ಪರಿಶುದ್ದ ಬೈಬಲ್‌

16 ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ ಹಗಲಿನಲ್ಲಿ ಅಡಗಿಕೊಂಡಿದ್ದು ಬೆಳಕನ್ನು ಅರಿಯದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:16
9 ತಿಳಿವುಗಳ ಹೋಲಿಕೆ  

ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು.


“ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು