Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:6 - ಪರಿಶುದ್ದ ಬೈಬಲ್‌

6 ಬಡವರು ರಾತ್ರಿಯವರೆಗೂ ಹೊಲಗಳಲ್ಲಿ ಬೆಳೆ ಕೊಯ್ಯುವರು; ದುಷ್ಟರ ದ್ರಾಕ್ಷಿತೋಟದಲ್ಲಿ ಅಳಿದುಳಿದ ದ್ರಾಕ್ಷಿಗಳನ್ನು ಆರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೊಟ್ಟೆಗಾಗಿ ಸೊಪ್ಪುಸದೆ ಕೊಯ್ದುಕೊಳ್ಳುತ್ತಾರೆ ಬಯಲಿನಲಿ ಹಕ್ಕಲನ್ನು ಆಯ್ದುಕೊಳ್ಳುತ್ತಾರೆ ದುಷ್ಟನ ದ್ರಾಕ್ಷಿತೋಟದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಮ್ಮ ಹೊಟ್ಟೆಗಾಗಿ ಬೈಲಿನಲ್ಲಿ ಸೊಪ್ಪುಸೆದೆಯನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷೇತೋಟದಲ್ಲಿ ಹಕ್ಕಲಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:6
8 ತಿಳಿವುಗಳ ಹೋಲಿಕೆ  

ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


“ಬಡವರು ಅಡವಿಯಲ್ಲಿನ ಕಾಡುಕತ್ತೆಗಳೋ ಎಂಬಂತೆ ತಮ್ಮ ಆಹಾರಕ್ಕಾಗಿ ದಿನವೆಲ್ಲಾ ದುಡಿಯುವರು; ಕೂಳೆಬಿಟ್ಟ ಹೊಲಗಳೇ ಅವರ ಮಕ್ಕಳಿಗೆ ಆಹಾರವನ್ನು ಒದಗಿಸುತ್ತವೆ.


ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ.


“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.


ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು