ಯೋಬ 24:7 - ಪರಿಶುದ್ದ ಬೈಬಲ್7 ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊದಿಯುವದಕ್ಕಿಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”