Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:8 - ಪರಿಶುದ್ದ ಬೈಬಲ್‌

8 ಅವರು ಬೆಟ್ಟಗಳಲ್ಲಿ ಮಳೆಯಿಂದ ನೆನೆದುಹೋಗಿದ್ದಾರೆ. ಚಳಿಯಿಂದ ರಕ್ಷಿಸಿಕೊಳ್ಳಲು ಏನೂ ಇಲ್ಲದೆ ವಿಶಾಲವಾದ ಬಂಡೆಯ ಮರೆಗಳನ್ನು ಆಶ್ರಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಲೆನಾಡಿನ ಭಾರಿಮಳೆಯಿಂದ ನೆನೆದುಹೋಗುತ್ತಾರೆ ಮರೆಯಿಲ್ಲದೆ ಕಲ್ಲುಬಂಡೆಗಳನು ಆಶ್ರಯಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ ಮರೆಯಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:8
5 ತಿಳಿವುಗಳ ಹೋಲಿಕೆ  

ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.


ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.


ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”


ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ.


ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು