Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:3 - ಪರಿಶುದ್ದ ಬೈಬಲ್‌

3 ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಂದಮತಿಯಾದವನಿಗೆ ಎಷ್ಟೋ ಬುದ್ಧಿ ಹೇಳಿರುವೆ ಸುಜ್ಞಾನವನ್ನು ಬಹಳವಾಗಿ ಬೋಧನೆಮಾಡಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಎಷ್ಟೋ ಧಾರಾಳವಾಗಿ ಉಪದೇಶಿಸಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:3
17 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.


“ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ ಈ ಮನುಷ್ಯನು ಯಾರು?


ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”


ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.


“ಆದರೆ ನೀವೆಲ್ಲರೂ ಬನ್ನಿರಿ, ನನ್ನ ತಪ್ಪನ್ನು ತೋರಿಸಿರಿ. ನಿಮ್ಮಲ್ಲಿ ಒಬ್ಬ ಜ್ಞಾನಿಯೂ ಇಲ್ಲ.


ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. ನೀವು ಮಾಡಬಹುದಾದ ಜ್ಞಾನದ ಕಾರ್ಯ ಅದೊಂದೇ.


ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು.


ಈಗ ನನಗೇ ಸಹಾಯಮಾಡಿಕೊಳ್ಳಲು ನನ್ನಲ್ಲಿ ಶಕ್ತಿಯಿಲ್ಲ. ಸಹಾಯಮಾಡವವರೂ ನನಗೆ ಯಾರೂ ಇಲ್ಲ.


“ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!


ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?


“ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು