ಯೋಬ 27:2 - ಪರಿಶುದ್ದ ಬೈಬಲ್2 “ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ, ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.