ಯೋಬ 27:23 - ಪರಿಶುದ್ದ ಬೈಬಲ್23 ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀ ಹಾಕಿ ಆಚೆಗೆ ಹೊರಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.” ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”