Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:4 - ಪರಿಶುದ್ದ ಬೈಬಲ್‌

4 ನನ್ನ ತುಟಿಗಳು ಕೆಟ್ಟ ಮಾತುಗಳನ್ನು ಆಡುವುದಿಲ್ಲ; ನನ್ನ ನಾಲಿಗೆಯು ಸುಳ್ಳಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ತುಟಿಗಳು ಅನ್ಯಾಯವನ್ನು ನುಡಿಯುವದೇ ಇಲ್ಲ, ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:4
8 ತಿಳಿವುಗಳ ಹೋಲಿಕೆ  

ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ?


ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.


ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’


ಆದರೆ ಈಗ ದಯವಿಟ್ಟು ನನ್ನ ಮುಖವನ್ನು ನೋಡಿರಿ. ನಾನು ನಿಮಗೆ ಸುಳ್ಳು ಹೇಳುವುದಿಲ್ಲ.


ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ. ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.


“ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?”


ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು