Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:25 - ಪರಿಶುದ್ದ ಬೈಬಲ್‌

25 ಆತನು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ ಸಾಗರಗಳ ವಿಸ್ತೀರ್ಣವನ್ನು ನಿರ್ಧರಿಸಿದಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗಾಳಿಗೆ ತಕ್ಕ ವೇಗವನು ನೇಮಿಸಿದಾಗ ಜಲಕ್ಕೆ ತಕ್ಕ ಜಾಗವನು ನಿರ್ಣಯಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇವಿುಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:25
7 ತಿಳಿವುಗಳ ಹೋಲಿಕೆ  

ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?


ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.


“ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?


ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?


“ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.


ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು