Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:28 - ಪರಿಶುದ್ದ ಬೈಬಲ್‌

28 ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:28
25 ತಿಳಿವುಗಳ ಹೋಲಿಕೆ  

ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ತಿಳುವಳಿಕೆಯನ್ನು ಪಡೆದುಕೊಳ್ಳುವುದೇ ವಿವೇಕದ ಮೂಲ.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ.


“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


“ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ? ವಿವೇಕವು ದೊರೆಯುವ ಸ್ಥಳವೆಲ್ಲಿ?


“ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು?


ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು; ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು