Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:4 - ಪರಿಶುದ್ದ ಬೈಬಲ್‌

4 ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದುಹೋಗುವರು; ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಣಿಯನ್ನು ತೋಡಿ ತೋಡಿ ಜನನಿವಾಸಗಳಿಗೆ ದೂರವಾಗಿ [ಮೇಲೆ] ನಡೆದಾಡುವವರಿಗೆ ಮರೆತುಹೋಗಿ ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ನೇತಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:4
3 ತಿಳಿವುಗಳ ಹೋಲಿಕೆ  

ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.


ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು.


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು