ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.
ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.
ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.