Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:20 - ಪರಿಶುದ್ದ ಬೈಬಲ್‌

20 ಜನರು ನನ್ನನ್ನು ಹೊಗಳುತ್ತಲೇ ಇರುವರು; ಕೈಯಲ್ಲಿ ಹೊಸಬಿಲ್ಲು ಇರುವಂತೆ ನಾನು ಬಲಿಷ್ಠನಾಗಿದ್ದೇನೆ’ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ನನ್ನ ಪ್ರತಿಷ್ಠತೆ ಹೊಸಹೊಸದಾಗಿ ಇರುತ್ತದೆ ನನ್ನ ಕೈಯಲ್ಲಿ ಬಿಲ್ಲು ಬಲಗೊಳ್ಳುತ್ತಾ ಇರುತ್ತದೆ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಮಾನವು ಹೊಸಹೊಸದಾಗುತ್ತಲೂ ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ ಎಂದೆಲ್ಲಾ ಹೇಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:20
9 ತಿಳಿವುಗಳ ಹೋಲಿಕೆ  

ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.


ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ. ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದುಹಾಕಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು