Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:8 - ಪರಿಶುದ್ದ ಬೈಬಲ್‌

8 ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು; ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯುವಕರು ಸರಿಯುತ್ತಿದ್ದರು ಪಕ್ಕಕ್ಕೆ ಮುದುಕರು ಎದ್ದು ನಿಲ್ಲುತ್ತಿದ್ದರು ತಟ್ಟನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೌವನಸ್ಥರು ನನ್ನನ್ನು ನೋಡಿ ಹಿಂದಾದರು, ವೃದ್ಧರು ಎದ್ದು ನಿಂತರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:8
10 ತಿಳಿವುಗಳ ಹೋಲಿಕೆ  

“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


“ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.


ಮಾತಾಡುತ್ತಿದ್ದ ಜನನಾಯಕರು ತಮ್ಮ ಬಾಯಿ ಮೇಲೆ ಕೈಯಿಟ್ಟುಕೊಂಡು ಮೌನವಾಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು