Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:15 - ಪರಿಶುದ್ದ ಬೈಬಲ್‌

15 ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:15
10 ತಿಳಿವುಗಳ ಹೋಲಿಕೆ  

ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.


ಆಗ ಸರ್ವಶಕ್ತನಾದ ದೇವರು ನಿನ್ನ ಪಾಲಿಗೆ ಬಂಗಾರವಾಗಿಯೂ ಬೆಳ್ಳಿಯ ರಾಶಿಗಳಾಗಿಯೂ ಇರುವನು.


ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು.


ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.


ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.


ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.


ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು