Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:22 - ಪರಿಶುದ್ದ ಬೈಬಲ್‌

22 ಅವರು ಸಮಾಧಿಗೆ ಸೇರುವಾಗ ಬಹು ಸಂತೋಷಪಡುವರು; ಆನಂದದಿಂದ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಸಮಾಧಿಗೆ ಸೇರುವಾಗ ಆಗುವುದು ಅವರಿಗೆ ಅಮಿತಾನಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಸಮಾಧಿ ಸೇರಿದ ಮೇಲೆ ಸಂತೋಷ ಸಂಭ್ರಮದಿಂದ ಹರ್ಷಿಸುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:22
10 ತಿಳಿವುಗಳ ಹೋಲಿಕೆ  

ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು.


ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೊ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೊ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ?


ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


“ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ? ನಾನು ಬಯಸಿದ್ದನ್ನು ದೇವರು ನನಗೆ ಕೊಡುವುದಿಲ್ಲವೇ?


ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.


ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು.


ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು