ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.