Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:5 - ಪರಿಶುದ್ದ ಬೈಬಲ್‌

5 ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:5
25 ತಿಳಿವುಗಳ ಹೋಲಿಕೆ  

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.


ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.


ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?


ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.


ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ಅತ್ತತ್ತು ನನ್ನ ಮುಖವು ಕೆಂಪಾಗಿದೆ, ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕಪ್ಪಾಗಿದೆ.


ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.


ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲಿನ ಲೋಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ.


ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು