Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:8 - ಪರಿಶುದ್ದ ಬೈಬಲ್‌

8 ಲಿವ್ಯಾತಾನನನ್ನು ಎಬ್ಬಿಸಬಲ್ಲ ಹಾಗೂ ದಿನಗಳನ್ನು ಶಪಿಸುವ ಮಾಂತ್ರಿಕರು ನಾನು ಹುಟ್ಟಿದ ರಾತ್ರಿಯನ್ನು ಶಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:8
11 ತಿಳಿವುಗಳ ಹೋಲಿಕೆ  

“ಯೋಬನೇ, ನೀನು ಲಿವ್ಯಾತಾನನನ್ನು ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ?


ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?


ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.


‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು. ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ದುಃಖಿಸಲಿಲ್ಲ.’


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.


ಅದು ಎದ್ದಾಗ ಬಲಿಷ್ಠರು ಭಯಪಡುವರು. ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು.


ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ.


ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರುನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು