Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:21 - ಪರಿಶುದ್ದ ಬೈಬಲ್‌

21 ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ. ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದೀ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:21
15 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!


ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!


ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ? ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು