Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:22 - ಪರಿಶುದ್ದ ಬೈಬಲ್‌

22 ದೇವರೆ, ನನ್ನನ್ನು ಎತ್ತಿಕೊಂಡು ಹೋಗಲು ನೀನು ಬಿರುಗಾಳಿಗೆ ಅವಕಾಶಕೊಟ್ಟೆ; ನೀನು ನನ್ನನ್ನು ಎತ್ತಿ ಬಿರುಗಾಳಿಗೆ ಎಸೆದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನನ್ನನು ಎತ್ತಿ ತೂರಿಬಿಟ್ಟಿರುವೆ ಬಿರುಗಾಳಿಗೆ ತೊಳಲಾಡುತ್ತಿರುವೆನು ತುಫಾನಿನ ಆರ್ಭಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನನ್ನು ಬಿರುಗಾಳಿಗೆ ಎತ್ತಿ ತೂರಬಿಟ್ಟು ಅದರ ಆರ್ಭಟದಲ್ಲಿ ಮಾಯಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:22
12 ತಿಳಿವುಗಳ ಹೋಲಿಕೆ  

ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡುಹೋಗುವುದು.


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.”


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.


ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು