ಯೋಬ 30:26 - ಪರಿಶುದ್ದ ಬೈಬಲ್26 ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರುನೋಡುತ್ತಿದ್ದಾಗ ನನಗೆ ಕತ್ತಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾನು ಒಳ್ಳೇದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರುನೋಡುತ್ತಿರುವಾಗ ಕತ್ತಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.