Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:28 - ಪರಿಶುದ್ದ ಬೈಬಲ್‌

28 ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಂತೈಸುವ ಸೂರ್ಯನಿಲ್ಲದೆ ಅಲೆಯುತ್ತಿರುವೆ ಮಂಕು ಕವಿದು ಅಂಗಲಾಚುತ್ತಿರುವೆ ಸಭೆಯ ಮಧ್ಯೆ ನಿಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಕರ್ರಗಾಗಿ ಅಲೆಯುತ್ತೇನೆ; ಆದರೆ ಆ ಕಪ್ಪು ಸೂರ್ಯಸಂತಾಪದಿಂದಲ್ಲ, ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಬಿಸಿಲು ನನ್ನ ಮೇಲೆ ಬೀಳದಿದ್ದರೂ ನಾನು ಕಪ್ಪಾಗಿ ಹೋದೆನು; ನಾನು ಸಭೆಯಲ್ಲಿ ಎದ್ದು ನಿಂತು ಸಹಾಯಕ್ಕಾಗಿ ಕೂಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:28
7 ತಿಳಿವುಗಳ ಹೋಲಿಕೆ  

ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.


‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.


ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿ ಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು